ರಾಯಚೂರು

ಅದ್ಧೂರಿ ಬೈಕ್ ರ್ಯಾಲಿ : ಸಾವಿರಾರು ಕಾರ್ಯಕರ್ತರು ಭಾಗಿ

ಲಿಂಗಸುಗೂರು : ಹಟ್ಟಿ ಚಿನ್ನದಗಣಿ ಅಧ್ಯಕ್ಷರ ಅಭಿನಂದನಾ ಸಮಾರಂಭ, ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ಮುಖಂಡರಿಗೆ ಅದ್ದೂರಿಯಾಗಿ ಬೈಕ್ ರ್ಯಾಲಿ ಮೂಲಕ ಸ್ವಾಗತಿಸಲಾಯಿತು.

ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸಂಸದ ರಾಜ ಅಮರೇಶ್ವರ ನಾಯಕ, ಹಟ್ಟಿ ಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ ಸೇರಿ ಪಟ್ಟಣಕ್ಕೆ ಮುಖಂಡರು ಆಗಮಿಸುತ್ತಿದ್ದಂತೆಯೇ ಸಾರಿಗೆ ಘಟಕದಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ಮೂಲಕ ಮುಖಂಡರನ್ನು ಸ್ಥಳಿಯ ವಿಜಯ ಮಹಾಂತೇಶ್ವರ ಶಾಖಾಮಠದಲ್ಲಿ ಆಯೋಜಿಸಿದ್ದ ಸಮಾರಂಭದ ವೇದಿಕೆಗೆ ಕರೆತರಲಾಯಿತು.

Leave a Reply

Your email address will not be published. Required fields are marked *

error: Content is protected !!