ರಾಯಚೂರು

ಕಾಂಗ್ರೆಸ್ ಮುಕ್ತ ಪಂಚಾಯಿತಿ ಆಡಳಿತವೇ ಬಿಜೆಪಿ ಗುರಿ : ಕಟೀಲ್

ಲಿಂಗಸುಗೂರು : ರಾಜಕೀಯದ ಬೇರು ಆಗಿರುವ ಪಂಚಾಯಿತಿ ಚುನಾವಣೆಗಳು ಇನ್ನೇನು ಆರಂಭಗೊಳ್ಳುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಪಂಚಾಯಿತಿ ಆಡಳಿತ ತರುವುದೇ ಬಿಜೆಪಿ ಪಕ್ಷದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಗ್ರಾಮದಲ್ಲೂ ಪಕ್ಷ ಸಂಘಟನೆಗೆ ಆಧ್ಯತೆ ನೀಡಲಾಗುತ್ತಿದೆ. ಕಾರ್ಯಕರ್ತರು ಹೆಚ್ಚಿನ ಉತ್ಸಾಹದಿಂದ ಪಕ್ಷ ಕಟ್ಟಿ ಕಾಂಗ್ರೆಸ್ ಮುಕ್ತ ನಾಡು ಕಟ್ಟಲು ಸಹಕಾರ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ ಕಟೀಲ್ ಕರೆ ನೀಡಿದರು.


ಪಟ್ಟಣದ ವಿಜಯಮಹಾಂತೇಶ್ವರ ಶಾಖಾ ಮಠದಲ್ಲಿ ಆಯೋಜಿಸಿದ್ದ ಅಭಿನಂದನಾ ಹಾಗೂ ಸ್ವರಾಜ್ಯ ಗ್ರಾಮ ಸಮಾವೇಶ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಳ್ಳಿಯಿಂದ ದಿಲ್ಲಿಯವರೆಗೆ ಕೇಸರಿ ಬಾವುಟ ಹಾರಬೇಕೆನ್ನುವ ಕರೆ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಬೂತ್ ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ಕೆಲಸಕ್ಕೆ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕು. ಕೆಳ ಹಂತದ ಕಾರ್ಯಕರ್ತರನ್ನು ನಾಯಕನ್ನಾಗಿ ಮಾಡುವ ಪಕ್ಷ ಬಿಜೆಪಿ ಮಾತ್ರ ಎಂದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಮಾತನಾಡುತ್ತಾ, ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನಮ್ಮದಾಗಿದ್ದರೆ, ಕಾಂಗ್ರೆಸ್‍ನವರದ್ದು ಮಾತ್ರ ಗಾಂಧಿ ಕುಟುಂಬದವರ ಸ್ವರಾಜ್ಯವಾಗಿದೆ. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿಯಾಗಲಿದೆ. ಬಿಜೆಪಿ ಪಕ್ಷವು ಗ್ರಾಮಗಳ ಮತ್ತು ರೈತರ ಸುಧಾರಣೆಯ ಬಗ್ಗೆ ಸಂಕಲ್ಪ ಮಾಡಿದೆ. ಆದ್ದರಿಂದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿ ಎಂದರು.


ಬಳಿಕ ರಾಜ್ಯಾಧ್ಯಕ್ಷ ಕಟೀಲ್ ಅವರಿಗೆ ಚಿನ್ನದ ಗಣಿ ಅದ್ಯಕ್ಷ ಮಾನಪ್ಪ ವಜ್ಜಲ್‍ರು ಬೆಳ್ಳಿ ಖಡ್ಗ ನೀಡಿ, ಸನ್ಮಾನಿಸಿ ಗೌರವಿಸಿದರು.
ಹಟ್ಟಿ ಚಿನ್ನದಗಣಿಯ ಅದ್ಯಕ್ಷ ಮಾನಪ್ಪ ವಜ್ಜಲ್, ಸಂಸದರಾದ ರಾಜಾ ಅಮರೇಶ್ವರ ನಾಯಕ, ಕರಡಿ ಸಂಗಣ್ಣ, ವೈ.ದೇವೇಂದ್ರಪ್ಪ, ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ ಹಿರೇಮನಿ, ತಾಲೂಕು ಅಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ, ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಡಾ.ಶಿವಬಸಪ್ಪ, ಪುರಸಭೆ ಸದಸ್ಯ ಮುದುಕಪ್ಪ ನಾಯಕ, ಮುಖಂಡರಾದ ಜಗನ್ನಾಥ ಕುಲಕರ್ಣಿ, ಅಬ್ದುಲ್ಲಾ ಬೇಕರಿ ಸೇರಿ ಪಕ್ಷದ ಕಾರ್ಯಕರ್ತರು, ಮುಖಂಡರು ಸಮಾರಂಭದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!