ಹಳ್ಳಿಯಿಂದ ದಿಲ್ಲಿವರೆಗೆ ಬಿಜೆಪಿ ಹವಾ, ಅಭ್ಯರ್ಥಿಗಳ ಹುಡುಕಾಟದಲ್ಲಿ ಕಾಂಗ್ರೆಸ್ : ಕಟೀಲ್
ಲಿಂಗಸುಗೂರು : ಬಿಜೆಪಿ ಪಕ್ಷ ಪ್ರತಿ ಚುನಾವಣೆಯಲ್ಲೂ ತನ್ನ ಸಾಮಥ್ರ್ಯವನ್ನು ಪ್ರದರ್ಶನ ಮಾಡುತ್ತಲೇ ಇದೆ. ಈ ಬಾರಿ ಹಳ್ಳಿಯಿಂದ ದಿಲ್ಲಿಯವರೆಗೆ ಬಿಜೆಪಿಯದ್ದೇ ಹವಾ ಇರಲಿದೆ. ಕಾಂಗ್ರೆಸ್ ಪಕ್ಷ ಅವಸಾನದ ಅಂಚಿನತ್ತ ತಲುಪಿದೆ. ಕಾಂಗ್ರೆಸ್‍ಗೆ ಹಳ್ಳಿಗಳಲ್ಲಿ ಅಭ್ಯರ್ಥಿಗಳ ಕೊರತೆ ಎದುರಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ ಕಟೀಲ್ ಲೇವಡಿ ಮಾಡಿದರು.
ಹಟ್ಟಿ ಚಿನ್ನದಗಣಿ ಅದ್ಯಕ್ಷ ಮಾನಪ್ಪ ವಜ್ಜಲ್‍ರ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಪಂ ಚುನಾವಣೆ ಈಗಾಗಲೇ ಘೋಷಣೆ ಯಾಗಿದ್ದು ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯ ಅಭ್ಯರ್ಥಿಗಳು ಭಾರತೀಯ ಜನತಾ ಪಾರ್ಟಿ ಪರವಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದ್ದು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅತೀ ಹೆಚ್ಚು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಕಾಂಗ್ರೆಸ್‍ಗೆ ಬೆಂಬಲಿತ ಅಭ್ಯರ್ಥಿಗಳು ಸಿಗುತ್ತಿಲ್ಲ, ಪಕ್ಷ ದುಸ್ಥಿತಿಗೆ ತಲುಪಿದೆ ಎಂದರು.
ಸಾರಿಗೆ ನೌಕರರ ಜೊತೆ ಸರ್ಕಾರ ಮಾತುಕತೆ ನಡೆಸುತ್ತಿದೆ. ವ್ಯತ್ಯಾಸಗಳ ಕುರಿತು ಚರ್ಚೆಯ ಮೂಲಕ ಪರಿಹಾರ ಕಂಡುಕೊಳ್ಳಬೇಕಿದ್ದು ಸಾರ್ವಜನಿಕರಿಗೆ ಸಮಸ್ಯೆಯಾಗಬಾರದು. ಎಪಿಎಂಸಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ. ರೈತರ ಹಿತದೃಷ್ಠಿಯಿಂದ ಅಭಿಪ್ರಾಯ ಪಡೆದು ಕಾಯ್ದೆ ರೂಪಿಸಲಾಗುತ್ತಿದೆ. ಆದರೆ ರೈತರನ್ನು ಕಾಂಗ್ರೆಸ್ ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಿಂದ ಬಿಜೆಪಿ ಪರವಾಗಿ ಬೆಂಬಲ ವ್ಯಕ್ತವಾಗುತ್ತಿದೆ. ಕಾರ್ಯಕರ್ತರಿಗೆ ಅಧಿಕಾರ ನೀಡುವ ನಿಟ್ಟಿನಲ್ಲಿ ಗ್ರಾಮ ಸ್ವರಾಜ್ಯ ಯಾತ್ರೆ ನಡೆಯುತ್ತಿದ್ದು ಶೇ.80ರಷ್ಟು ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಅಭಿವೃದ್ಧಿ, ಅನುದಾನಗಳ ವಿಚಾರದಲ್ಲಿ ಶಾಸಕರ ಅಸಮಧಾನ ಇದೆ. ನಾಯಕತ್ವ ಕುರಿತು ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಜೊತೆಗೆ ಮೂಲ-ವಲಸೆ ಎಂಬ ಪ್ರಶ್ನೆ ಉದ್ಭವಿಸಲ್ಲ. ಪಕ್ಷದ ಚಿಹ್ನೆಯಿಂದ ಗೆದ್ದ ಮೇಲೆ ಎಲ್ಲರೂ ಒಂದೇ. ಸಚಿವ ಸ್ಥಾನದ ಬಗ್ಗೆ
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಹಟ್ಟಿ ಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್, ಶಾಸಕ ಡಾ. ಶಿವರಾಜ ಪಾಟೀಲ್, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಇದ್ದರು.

