ಸಾರಿಗೆ ನೌಕರರ ಪ್ರತಿಭಟನೆ : ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮನವಿ
ಲಿಂಗಸುಗೂರು : ಸಾರಿಗೆ ಇಲಾಖೆ ನೌಕರರನ್ನು ಸರಕಾರಿ ನೌಕರರೆಂದು ಪರಿಗಣಿಸಿ ನಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸಲು ಸರಕಾರಕ್ಕೆ ಒತ್ತಾಯಿಸಬೇಕೆಂದು ಪ್ರತಿಭಟನಾ ನಿರತ ಸಾರಿಗೆ ಇಲಾಖೆ ನೌಕರರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ ಕಟೀಲ್‍ರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರಕಾರವು ಕಳೆದ 28 ವರ್ಷಗಳಿಂದ ಸಾರಿಗೆ ನೌಕರರನ್ನು ಕಡೆಗಣಿಸುತ್ತಲೇ ಬಂದಿದೆ. ಹಗಲಿರುಳೂ ಸೇವೆ ಸಲ್ಲಿಸುತ್ತಿರುವ ನೌಕರರ ಹಿತಕಾಯಲು ಸರಕಾರ ಮುಂದಾಗಬೇಕೆಂದು ಒತ್ತಾಯಿಸಿದರು.
ಹಟ್ಟಿ ಚಿನ್ನದಗಣಿ ಅದ್ಯಕ್ಷ ಮಾನಪ್ಪ ವಜ್ಜಲ್, ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಾ.ಶಿವರಾಜ ಪಾಟೀಲ್ ಸೇರಿ ಪಕ್ಷದ ಹಿರಿಯ ಮುಖಂಡರು ಈ ಸಂದರ್ಭದಲ್ಲಿ ಇದ್ದರು.

