ರಾಯಚೂರು

ಅಭಿವೃದ್ಧಿ ಕಾರ್ಯಕ್ಕೆ ಮತದಾರರ ಬಹುಮಾನ : ಶಾಸಕ ಹೂಲಗೇರಿ

ಲಿಂಗಸುಗೂರು : ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಮನ್ನಣೆ ನೀಡಿದ್ದಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಹುಮಾನ ನೀಡಿದ್ದಾರೆಂದು ಶಾಸಕ ಡಿ.ಎಸ್.ಹೂಲಗೇರಿ ಹೇಳಿದರು.


ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮತದಾರರಿಗೆ ಅಭಿನಂದನೆ ಸಲ್ಲಿಸಿದರು. ತಾಲೂಕಿನಲ್ಲಿ ಅಭಿವೃದ್ದಿ ಕೆಲಸಕ್ಕೆ ಸಹಕರಿಸಿ ಹೆಚ್ಚಿನ ಸ್ಥಾನ ಕಾಂಗ್ರೆಸ್ ಮಡಿಲಿಗೆ ಬಂದಿವೆ. ಕಾಂಗ್ರೆಸ್ ತನ್ನ ಪ್ರಭಾವ ಉಳಿಸಿಕೊಂಡಿದೆ. ಕಾಂಗ್ರೆಸ್ 21 ಗ್ರಾ. ಪಂ. ಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರಕ್ಕೆ ಬರುತ್ತವೆ. ಮುಂದಿನ ವಿಧಾನಸಭಾ ಚುನಾವಣೆಗೆ ಇದು ಮುನ್ನುಡಿ ಬರೆದಂತಾಗಿದೆ.

ತಾಲೂಕಿನ ಪೈದೊಡ್ಡಿ, ಈಚನಾಳ, ಹೊನ್ನಹಳ್ಳಿ, ಗೌಡೂರು, ಮಾವಿನಭಾವಿ, ನಾಗರಹಾಳ, ಉಪ್ಪರನಂದಿಹಾಳ, ಕೋಠಾ, ಗಜ್ಜೆಲಗಟ್ಟಾ, ನಾಗಲಾಪೂರ ಸೇರಿದಂತೆ ಹೆಚ್ಚಿನ ಸಂಖ್ಯೆಯ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಪಾಟೀಲ್, ಪುರಸಭೆ ಉಪಾಧ್ಯಕ್ಷ ಮಹ್ಮದ್ ರಫಿ ಮುಖಂಡರಾದ ಶರಣಪ್ಪ ಮೇಟಿ, ಪಾಮಯ್ಯ ಮುರಾರಿ, ಮಲ್ಲಣ್ಣ ವಾರದ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *

error: Content is protected !!