ರಾಯಚೂರು

ಲಿಂಗಸುಗೂರು : ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಲಿಂಗಸುಗೂರು : ಸುಮಾರು 11 ತಿಂಗಳಿಂದ ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ಕೊರೊನಾ ಮಹಾಮಾರಿಯ ಸೊಂಕನ್ನು ಮಟ್ಟಹಾಕಲು ಕೊನೆಗೂ ಭಾರತ ಲಸಿಕೆ ಕಂಡು ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಇಂದಿನಿಂದ ದೇಶಾದ್ಯಂತ ಲಸಿಕೆ ಹಾಕುವ ಕಾರ್ಯಕ್ಕೆ ಪ್ರಧಾನಿಗಳು ಆನ್‍ಲೈನ್ ಮೂಲಕ ಚಾಲನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲೂ ಶುಕ್ರವಾರ ರಾತ್ರಿ ಲಸಿಕೆ ದಾಸ್ತಾನು ಆಗಮಿಸಿದ್ದು, ಮೊದಲ ಹಂತದಲ್ಲಿ 100 ಜನರಿಗೆ ಲಸಿಕೆ ನೀಡಲಾಗಿದೆ.


ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಸೇರಿ ಈಗಾಗಲೇ ನೋಂದಣೆ ಮಾಡಿಸಿರುವ 100 ಜನರಿಗೆ ಮೊದಲ ಸುತ್ತಿನಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ವ್ಯಾಕ್ಸಿನ್ ನೀಡಲಾಗುತ್ತದೆ. ಫೆ.15ಕ್ಕೆ ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಇರುತ್ತದೆ. ಲಸಿಕೆ ಹಾಕಲು ಬೇಕಾದ ಸಕಲ ಸಿದ್ಧತೆಗಳನ್ನು ತಾಲೂಕು ಆಸ್ಪತ್ರೆಯಲ್ಲಿ ಮಾಡಿಕೊಳ್ಳಲಾಗಿತ್ತು.

ಸುರಕ್ಷತೆ ಮತ್ತು ಭದ್ರತೆಯಲ್ಲಿ ಆಯ್ದ ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಲಕ್ಷ್ಮಪ್ಪ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಆಸ್ಪತ್ರೆಗೆ ಲಸಿಕಾ ಪೆಟ್ಟಿಗೆಗಳನ್ನು ಹೊತ್ತು ಬಂದ ವ್ಯಾಕ್ಸಿನ್ ವಾಹನವನ್ನು ಆರೋಗ್ಯ ಇಲಾಖೆ ಸಿಬ್ಬಂಧಿಗಳು ಆರತಿ ಬೆಳಗಿ ಸ್ವಾಗತಿಸಿಕೊಂಡರು. ತಾಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್ ಸೇರಿ ಆರೋಗ್ಯ ಇಲಾಖೆ ಸಿಬ್ಬಂಧಿಗಳು ಈ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *

error: Content is protected !!