ರಾಯಚೂರು

ವಿದ್ಯಾರ್ಥಿಗಳ ಶಾಲಾ ಸಮಯಕ್ಕೆ ಸಾರಿಗೆ ವ್ಯವಸ್ಥೆ ಮಾಡಲು ಆಗ್ರಹ

ಲಿಂಗಸುಗೂರು : ತಾಲೂಕಿನ ಜೂಲಗುಡ್ಡ ಗ್ರಾಮದಿಂದ ಲಿಂಗಸುಗೂರು ಪಟ್ಟಣದಲ್ಲಿ ಪ್ರತಿನಿತ್ಯ ಬರುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ಸಮಯಕ್ಕೆ ಸರಿಯಾಗಿ ಸಾರಿಗೆ ಬಸ್‍ಗಳ ವ್ಯವಸ್ಥೆ ಮಾಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.


ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು, ಜೂಲಗುಡ್ಡ ಮಾರ್ಗವಗಿ ನಾಗರಹಾಳ ಗ್ರಾಮಕ್ಕೆ ಶಾಲಾ-ಕಾಲೇಜು ಸಮಯಕ್ಕೆ ಸರಿಯಾಗಿ ಬೆಳಗ್ಗೆ ಹಾಗೂ ಸಂಜೆ ಹೊತ್ತು ಬಸ್‍ಗಳ ವ್ಯವಸ್ಥೆ ಮಾಡಬೇಕು. ಈಗಾಗಲೇ ಜೂಲಗುಡ್ಡ ಗ್ರಾಮಕ್ಕೆ ಬಸ್ಸುಗಳು ಸಮಯಕ್ಕೆ ಸರಿಯಾಗಿ ಬರುತ್ತಿದ್ದವು. ಕೋವಿಡ್ ಲಾಕ್‍ಡೌನ್ ಪರಿಣಾಮ ಬಸ್‍ಗಳ ರೂಟ್‍ಗಳನ್ನು ಸ್ಥಗಿತಗೊಳಿಸಲಾಗಿದೆ. ಪುನಃ ಶಾಲಾ-ಕಾಲೇಜುಗಳು ಆರಂಭವಾದ ಪರಿಣಾಮ ವಿದ್ಯಾರ್ಥಿಗಳಿಗೆ ಸಮಯಕ್ಕೆ ಬರಲು ತೊಂದರೆ ಆಗುತ್ತಿದೆ. ಕೂಡಲೇ ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್‍ಗಳ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.


ಸಿದ್ದು ನಾಯಕ, ನಾಗಪ್ಪ, ಶಿವನಗೌಡ, ಅಮ್ಜದ್, ಉದಯಕುಮಾರ, ಚಂದಪ್ಪ, ಛತ್ರಪ್ಪ, ದೇವರಾಜ, ಹುಲುಗಪ್ಪ, ಮಲ್ಲಿಕಾರ್ಜುನ ಸೇರಿ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!