ಅನುಗ್ರಹ ಯೋಜನೆ ಮುಂದುವರೆಸಲು ಆಗ್ರಹಿಸಿ ಪ್ರತಿಭಟನೆ: ಕರೆ
ಲಿಂಗಸುಗೂರು : ರಾಯಚೂರು ಜಿಲ್ಲೆಯಲ್ಲಿ ಸಾವನ್ನಪ್ಪಿರುವ 500ಕ್ಕೂ ಹೆಚ್ಚಿನ ಕುರಿ ಮತ್ತು ಮೇಕೆಗಳಿಗೆ 13 ಲಕ್ಷ ರೂಪಾಯಿ ಅನುದಾನ ಬಿಡುಗಡೆಯ ಜೊತೆಗೆ ಅನುಗ್ರಹ ಯೋಜನೆಯನ್ನು ಸರಕಾರ ಮುಂದುವರೆಸಬೇಕೆಂದು ಆಗ್ರಹಿಸಿ ಜಿಲ್ಲಾ ಕೇಂದ್ರದಲ್ಲಿ ಜ.18 (ಇಂದು)ಕ್ಕೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯ ಬಾಂಧವರು ಪಾಲ್ಗೊಳ್ಳಬೇಕೆಂದು ಲಿಂಗಸುಗೂರು ಹೋಬಳಿ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅದ್ಯಕ್ಷ ಮಂಜುನಾಥ ಹೊಸಮನಿ ಕರೆ ನೀಡಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ರಾಯಚೂರು ಜಿಲ್ಲೆಯಲ್ಲಿ ಕರ್ನಾಟಕ ಕುರಿ ಮತ್ತು ಮೇಕೆ ಸಾಕಣಿಕೆದಾರಾರ ಸಂಘಗಳ ಎಲ್ಲ ಕಟ್ಟಡ ಮತ್ತು ಮಹಾಮಂಡಳ ಜಿಲ್ಲಾ ಸಮಿತಿ ರಾಯಚೂರು ವತಿಯಿಂದ ಶ್ರೀ ಕನಕದಾಸ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕುರಿಗಾರರ ವಿವಿಧ ಸಮಸ್ಯೆ ಬಗ್ಗೆ ಬೃಹತ್ ಪ್ರತಿಭಟನೆ ಮೆರವಣಿಗೆಯನ್ನು ಹಮ್ಮಿಕೊಂಡಿದೆ. ತಾಲೂಕಿನ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆ ಯಶ್ವಸಿಗೊಳಿಸಬೇಕು. ಪ್ರತಿಭಟನೆಯಲ್ಲಿ ರಾಜ್ಯ ಕುರಿ ಮತ್ತು ಮೇಕೆ ಸಾಕಾಣಿಕೆದಾರ ಮಹಾಮಂಡಳದ ಅಧ್ಯಕ್ಷ ಪಂಡಿತ್‍ರಾವ್ ಚಿದ್ರಿ ಸೇರಿದಂತೆ ಕುರುಬ ಸಂಘದ ವಿವಿಧ ತಾಲೂಕಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆಂದು ಹೊಸಮನಿ ತಿಳಿಸಿದ್ದಾರೆ.

