ರಾಯಚೂರು

ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಲಿಂಗಸುಗೂರು : ಕೊರೊನಾ ಲಾಕ್‍ಡೌನ್‍ನಿಂದ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಇತ್ತೀಚೆಗೆ ಶಾಲಾ-ಕಾಲೇಜುಗಳು ಆರಂಭಗೊಂಡಿವೆಯಷ್ಟೆ. ಆದರೆ, ವಿದ್ಯಾರ್ಥಿಗಳಿಗೆ ಮಾತ್ರ ಸಮಸ್ಯೆಗಳು ನಿರಂತರವಾಗಿ ಕಾಡುತ್ತಲೇ ಇವೆ. ಕೂಡಲೇ ಸರಕಾರ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂಧಿಸಬೇಕೆಂದು ಆಗ್ರಹಿಸಿ ಎಬಿವಿಪಿ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.


ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ ವಿದ್ಯಾರ್ಥಿಗಳು, ಸರಕಾರ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ಬಡ, ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳನ್ನು ಆರಂಭಿಸಿದ್ದು, ಉಳಿದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕಾರಣ ಎಲ್ಲ ವಿದ್ಯಾರ್ಥಿಗಳಿಗೆ ವಸತಿ ನಿಲಯ ಆರಂಭಿಸಬೇಕು.
ಪ್ರಸ್ತುತ ಕಾಲೇಜುಗಳು ಆರಂಭಗೊಂಡು ವಿದ್ಯಾರ್ಥಿಗಳು ತರಗತಿಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ, ಅನೇಕ ಕಾಲೇಜುಗಳಲ್ಲಿ ಕೆಲ ವಿಷಯಗಳಿಗೆ ಖಾಯಂ ಉಪನ್ಯಾಸಕರಿಲ್ಲದೆ ತೊಂದರೆಯಾಗಿದೆ. ಸರಕಾರ ಅತಿಥಿ ಉಪನ್ಯಾಸಕರನ್ನು ನೇಮಿಸಲು ಆದೇಶಿಸಿ ಎಲ್ಲ ತರಗತಿಗಳು ನಡೆಸುವಂತೆ ಕ್ರಮ ಕೈಗೊಳ್ಳಬೇಕು. ವರ್ಷದ 12 ತಿಂಗಳ ಕಾಲ ವೇತನ ನೀಡಬೇಕೆಂದು ಒತ್ತಾಯಿಸಿದರು.


ಎಬಿವಿಪಿ ಜಿಲ್ಲಾ ಸಹಸಂಚಾಲಕ ಹೇಮಂತ, ನಗರ ಘಟಕ ಅಧ್ಯಕ್ಷ ವಿಠ್ಠಲ ಹುನಗುಂದ, ಕಾರ್ಯದರ್ಶಿ ಜಗದೀಶ ದೊಡ್ಡಮನಿ, ಸಹ ಕಾರ್ಯದರ್ಶಿ ಮೌನೇಶ, ಎಸ್‍ಎಫ್‍ಡಿ ಸಂಚಾಲಕ ಮಲ್ಲು, ವಿದ್ಯಾರ್ಥಿಗಳಾದ ಸುರೇಶ, ಸೋಮು, ಜಗ್ಗು, ದೀಪಾ, ಮಂಜುಳಾ, ಮೀನಾಕ್ಷಿ, ಹುಲಿಗೆಮ್ಮ, ಅಶ್ವಿನಿ, ಹನುಮಂತಿ, ಶ್ವೇತಾ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಇದ್ದರು. ಪಿಎಸ್‍ಐ ಪ್ರಕಾಶರೆಡ್ಡಿ ವಿದ್ಯಾರ್ಥಿಗಳ ಪ್ರತಿಭಟನಾ ರ್ಯಾಲಿಗೆ ಸೂಕ್ತ ಬಂದೋಬಸ್ತ ವದಗಿಸಿದ್ದರು.

Leave a Reply

Your email address will not be published. Required fields are marked *

error: Content is protected !!